ಲೈಂಗಿಕ ದೌರ್ಜನ್ಯ ಹೆಚ್ಚಳಕ್ಕೆ ಪಂಜಾಬ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ!

ಶನಿವಾರ, 25 ಜೂನ್ 2022 (09:08 IST)
ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದ ಪಂಜಾಬ್ನಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಏಕಾಏಕಿ ಹೆಚ್ಚಾಗುತ್ತಿರುವುದು ಸಮಾಜ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಗಂಭೀರ ಸಮಸ್ಯೆಯಾಗಿದೆ.

ಅತ್ಯಾಚಾರ ಪ್ರಕರಣಗಳನ್ನು ಹತೋಟಿಗೆ ತರಲು ತುರ್ತು ಪರಿಸ್ಥಿತಿಯನ್ನು ಘೋಷಿಸಲು ಆಡಳಿತವನ್ನು ಒತ್ತಾಯಿಸಲಾಗಿದೆ ಎಂದು ಪಂಜಾಬ್ ಗೃಹ ಸಚಿವ ಅಟ್ಟ ತರಾರ್ ಹೇಳಿದ್ದಾರೆ. 

ಪಂಜಾಬ್ನಲ್ಲಿ ಪ್ರತಿದಿನ 4-5 ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಲೈಂಗಿಕ ಕಿರುಕುಳ, ನಿಂದನೆ ಮತ್ತು ಬಲವಂತದ ಪ್ರಕರಣಗಳನ್ನು ಎದುರಿಸಲು ಸರ್ಕಾರ ವಿಶೇಷ ಕ್ರಮಗಳನ್ನು ಪರಿಗಣಿಸುತ್ತಿದೆ ಎಂದು ಪ್ರಾಂತೀಯ ಸಚಿವರು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪ್ರಧಾನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ