ಅಂಚೆ ಇಲಾಖೆಯಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ.
ಈ ಇಲಾಖೆಯಲ್ಲಿನ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಒಟ್ಟು 29 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಅದರಂತೆ 15 ಸಾಮಾನ್ಯ ವರ್ಗದವರಿಗೆ, 8 ಒಬಿಸಿ, 3 ಎಸ್‌ಸಿ ಮತ್ತು 3 ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರಿಂದ ರೂ 63,200 ರವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಹತಾ ಮಾನದಂಡಗಳು
ಅಭ್ಯರ್ಥಿಯು ಲಘು ಮತ್ತು ಭಾರೀ ಮೋಟಾರು ವಾಹನಗಳಿಗೆ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಮೋಟಾರ್ ಮೆಕ್ಯಾನಿಸಂನ ಜ್ಞಾನ (ಅಭ್ಯರ್ಥಿಯು ವಾಹನದಲ್ಲಿನ ಸಣ್ಣ ದೋಷಗಳನ್ನು ತೆಗೆದುಹಾಕಲು ಶಕ್ತರಾಗಿರಬೇಕು) ಹೊಂದಿರಬೇಕು. ಕನಿಷ್ಠ ಮೂರು ವರ್ಷಗಳ ಲಘು ಮತ್ತು ಭಾರೀ ವಾಹನ ಚಾಲನೆ ಅನುಭವ ಹೊಂದಿರಬೇಕು. ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಅರ್ಜಿದಾರರ ವಯಸ್ಸು 18 ರಿಂದ 27 ವರ್ಷಗಳ ನಡುವೆ ಇರಬೇಕು. ಎಸ್‌ಸಿ ಮತ್ತು ಎಸ್‌ಟಿಗೆ 5 ಹಾಗೂ ಒಬಿಸಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.