ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕ ಏರಿಕೆ!

ಭಾನುವಾರ, 12 ಡಿಸೆಂಬರ್ 2021 (11:03 IST)
ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಮಾರ್ಗಸೂಚಿ ಅನುಸರಿಸಿದ್ದರಿಂದ ಹೊರೆಯಾದ ವೆಚ್ಚ ಸರಿದೂಗಿಸಲು ಹಾಗೂ ಪರೀಕ್ಷಾ ಪ್ರಕ್ರಿಯೆ ವೆಚ್ಚ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕವನ್ನು 100 ರು. ಹೆಚ್ಚಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
 
ಅದರಿಂದಾಗಿ ಶುಲ್ಕ 485 ರು.ನಿಂದ 585 ರು.ಗೆ ಏರಿಕೆಯಾಗಿದೆ. ಪುನರಾವರ್ತಿತ ಶಾಲಾ, ಖಾಸಗಿ ಅಭ್ಯರ್ಥಿಗಳು ಒಂದು ವಿಷಯಕ್ಕೆ ಕಟ್ಟಬೇಕಿದ್ದ ಶುಲ್ಕವನ್ನು 320 ರಿಂದ 370 ಕ್ಕೆ ಹೆಚ್ಚಳ ಮಾಡಲಾಗಿದೆ.

2 ವಿಷಯಕ್ಕೆ 386 ರು. ಪಾವತಿಸಬೇಕಿದ್ದ  ಎಸ್ಎಸ್ಎಲ್ಸಿ  ವಿದ್ಯಾರ್ಥಿಗಳು 461 ರು. ಹಾಗೂ 3 ಮತ್ತು ಅದಕ್ಕಿಂತ ಹೆಚ್ಚಿನ ವಿಷಯಗಳಿಗೆ 520 ರು. ಬದಲಿಗೆ 620 ರು. ಪರೀಕ್ಷಾ ಶುಲ್ಕ ಪಾವತಿಸಬೇಕಿದೆ. ಬೋರ್ಡ್ ಪರೀಕ್ಷೆ 2022 ರಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಖಾಸಗಿ ವಿದ್ಯಾರ್ಥಿಗಳಿಗೆ ಹೊಸ ರೋಲ್ ಸಂಖ್ಯೆಯನ್ನು ನೀಡಲಾಗುತ್ತದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹೊಸ ರೋಲ್ ಸಂಖ್ಯೆಗಳನ್ನು ನೀಡಲಾಗುವುದು ಎಂದು ಸಿಬಿಎಸ್ಇ ತಿಳಿಸಿದೆ.  ಖಾಸಗಿ ವಿದ್ಯಾರ್ಥಿಗಳಿಗೆ  ಅಃSಇ ಪರೀಕ್ಷೆ 2022ಕ್ಕೆ ಹೆಸರು ನೋಂದಾಯಿಸಲು ಕೊನೆಯ ದಿನಾಂಕ 20 ಡಿಸೆಂಬರ್ 2021 ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ರೂ.2000 ವಿಳಂಬ ಶುಲ್ಕದೊಂದಿಗೆ ಡಿಸೆಂಬರ್ 30 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ