ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು.
ಉನ್ನತ ಶಿಕ್ಷಣಕ್ಕೆ ಉಚಿತ ಆನ್ಲೈನ್ ಕೋಚಿಂಗ್ ಯೋಜನೆ ನೀಡಲಾಗುವುದು ಎಂದು ಶಿಕ್ಷಣ ಕ್ಷೇತ್ರದ ವಿಶೇಷ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಇಂದು ಚೊಚ್ಚಲ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನೋಡಿ ಕಲಿ, ಮಾಡಿ ಕಲಿ ಕಲ್ಪನೆಯಡಿ ಕಿಟ್ ವಿತರಣೆ ಮಾಡಲಾಗುವುದು. 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಕಿಟ್ ವಿತರಿಸಲಾಗುವುದು. ಲ್ಯಾಬ್ ಇನ್ ಎ ಕಿಟ್ ವಿತರಣೆ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಯುವಕರ ಸ್ವ-ಉದ್ಯೋಗ, ಆರ್ಥಿಕ ಚಟುವಟಿಕೆ ಪ್ರೋತ್ಸಾಹಕ್ಕೆ ನಿರ್ಧಾರ ಮಾಡಲಾಗಿದೆ. ಪ್ರತೀ ಗ್ರಾ.ಪಂನಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸ್ವಸಹಾಯ ಗುಂಪು, ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣ ಉನ್ನತೀಕರಣಕ್ಕೆ 100 ಕೋಟಿ ರೂಪಾಯಿ ನೀಡಿಕೆ, ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳ ಉತ್ತೇಜನಕ್ಕೆ ಕ್ರೀಡಾ ಅಂಕಣ ಸ್ಥಾಪನೆ ಮಾಡಲಾಗುವುದು ಎಂದು ಹೇಳಲಾಗಿದೆ.