ತಿರುವನಂತಪುರಂ : ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಯುಎಇಯಿಂದ ವಾಪಸ್ ಆಗಿದ್ದ ಕೇರಳದ 35 ವರ್ಷ ಪ್ರಾಯದ ವ್ಯಕ್ತಿಯೋರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ಕೊಲ್ಲಂನ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಅತನನ್ನು ಆಸ್ಪತ್ರೆಗೆ ದಾಖಲಿಸಿ ಮಾದರಿಗಳನ್ನು ಪರೀಕ್ಷೆ ನಡೆಸಿದಾಗ ಬಳಿಕ ಸೋಂಕು ಇರುವುದು ಖಚಿತಗೊಂಡಿದೆ.
ಇದೀಗ ಸೋಂಕು ಖಚಿತಗೊಂಡಂತೆ ಆ ವ್ಯಕ್ತಿಯನ್ನು ಸಂಪರ್ಕ ಹೊಂದಿದವರ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ಅತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್ಐವಿ) ಕಳುಹಿಸಲಾಗಿದೆ ಎಂದು ನಿನ್ನೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ಹಂಚಿಕೊಂಡಿದ್ದರು.
ಇದೀಗ ಪರೀಕ್ಷೆಯ ಫಲಿತಾಂಶ ಬಂದಿದ್ದು ಅತನಿಗೆ ಮಂಕಿಪಾಕ್ಸ್ ಸೋಂಕು ಇರುವುದು ಖಚಿತಗೊಂಡಿದೆ.