ಪಂಚ ರಾಜ್ಯಗಳ ಚುನಾವಣೆ ಡೇಟ್ ಫಿಕ್ಸ್?

ಶನಿವಾರ, 8 ಜನವರಿ 2022 (16:10 IST)
ನವದೆಹಲಿ : ಮುಂಬರುವ ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ವಿಧಾನಸಭಾ ಚುನಾವಣೆ ದಿನಾಂಕ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಕೇಂದ್ರ ಚುನಾವಣಾ ಆಯೋಗ ಶನಿವಾರ ಸುದ್ದಿಗೋಷ್ಠಿಯಲ್ಲಿ ಚುನಾವಣೆಯ ಮಾಹಿತಿ ನೀಡಿತು. ಪಂಚ ರಾಜ್ಯಗಳಿಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10 ರಿಂದ ಮಾರ್ಚ್ 7ರ ವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಫಲಿತಾಂಶ ಹೊರ ಬೀಳಲಿದೆ. 

ಕಠಿಣ ಪರಿಸ್ಥಿತಿಯಲ್ಲೂ ಚುನಾವಣೆ ನಡೆಸುವುದು ನಮ್ಮ ಕರ್ತವ್ಯ. ಮುನ್ನೆಚ್ಚರಿಕೆ ನಿಯಮಗಳೊಂದಿಗೆ ಚುನಾವಣೆ ನಡೆಸಲು ತಿರ್ಮಾನಿಸಲಾಗಿದೆ. ಕೊವೀಡ್ ಸೇಫ್ ಎಲೆಕ್ಷನ್ ನಡೆಸಲಾಗುವುದು.

ಹೆಚ್ಚು ಜನರು ಎಲೆಕ್ಷನ್ನಲ್ಲಿ ಭಾಗಿಯಾಗುವಂತೆ ಮಾಡಲಾಗುವುದು. ಈಗಾಗಲೇ ಸಾಕಷ್ಟು ಸಭೆಗಳನ್ನು ನಡೆಸಲಾಗಿದೆ. ಗೃಹ ಇಲಾಖೆ, ಆರೋಗ್ಯ ಇಲಾಖೆ, ರಾಜಕೀಯ ಪಕ್ಷಗಳ ಜೊತೆಗೆ ಸಭೆ ನಡೆಸಿದೆ. ರಾಜ್ಯ ಸರ್ಕಾರದ ಹಲವು ಅಧಿಕಾರಿಗಳ ಜೊತೆಗೆ ಸಭೆ ನಡೆದಿದೆ.

ಅವರಿಂದ ಹಲವು ಸಲಹೆಗಳನ್ನು ಪಡೆಯಲಾಗಿದೆ ಎಂದು ಚುನಾವಣಾ ಆಯೋಗದ ಸುಶೀಲ್ ಚಂದ್ರ ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ