ಬೆಂಗಳೂರು : ಆಗಸ್ಟ್ 15ರ ನಂತರ ಬೆಂಗಳೂರಿನಲ್ಲಿ ಸಂಪೂರ್ಣವಾಗಿ ಫ್ಲೆಕ್ಸ್, ಬ್ಯಾನರ್ ನಿಷೇಧಿಸಲಾಗಿದೆ. ಯಾರಾದರು ಫ್ಲೆಕ್ಸ್, ಬ್ಯಾನರ್ ಹಾಕಿದರೆ 50,000 ರೂ. ದಂಡ ಹಾಕಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಸಿದರು.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೊರಗಡೆ ನೋಡಿದಾಗ ನನಗೆ ಅಸಹ್ಯ ಎನ್ನಿಸಿದೆ. ಬ್ಯಾನರ್, ಫ್ಲೆಕ್ಸ್ ಯಾರದೇ ಆಗಲಿ ಸಂಪೂರ್ಣ ಬ್ಯಾನ್. ಯಾರು ಕೂಡ ಹಾಕಬಾರದು. ಯಾರದಾದರು ಹೆಸರಲ್ಲಿ ಹಾಕಿದರೆ ಅವರಿಗೂ 50 ಸಾವಿರ ದಂಡ ಹಾಕುತ್ತೇವೆ. ಇನ್ಮೇಲೆ ಫ್ಲೆಕ್ಸ್ ಹಾಕಿದರೆ ಎಫ್ಐಆರ್ ಕೂಡ ದಾಖಲಾಗುತ್ತದೆ ಎಂದು ತಿಳಿಸಿದರು.
ನಾನು ಉಸ್ತುವಾರಿ ಆದಾಗಲೆ ಘೋಷಣೆ ಮಾಡಬೇಕು ಎಂದುಕೊಂಡಿದ್ದೆ. ಕೆಲವು ಕಾರಣಕ್ಕೆ ತಡವಾಗಿ ಘೋಷಣೆ ಮಾಡಿದ್ದೇನೆ. ಒಂದು ಪಾಲಿಸಿ ಮಾಡುತ್ತೇವೆ. ಸರ್ಕಾರದ್ದು ಯಾವುದಾದರು ಹಾಕವಂತಹ ಪ್ರಸಂಗ ಬಂದರೆ ಅದು ಹೇಗೆ ಎಂಬುದರ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.
ಬೆಂಗಳೂರು ಸಿಟಿಯೊಳಗೆ ಫ್ಲೆಕ್ಸ್, ಬ್ಯಾನರ್ ಯಾರೂ ಹಾಕಬಾರದು. ನಾನು ಸೇರಿ ಯಾರು ಕೂಡ ಹಾಕಬಾರದು. ಇನ್ಮೇಲೆ ಅಕ್ರಮವಾಗಿರುವ ಫ್ಲೆಕ್ಸ್ ಹಾಕುವಂತಿಲ್ಲ. ಯಾರಾದ್ರೂ ಫ್ಲೆಕ್ಸ್ ಹಾಕಿದ್ರೆ 50 ಸಾವಿರ ದಂಡ. ಈಗಿರುವ ಫ್ಲೆಕ್ಸ್ ತೆರವು ಮಾಡಬೇಕು. ಫ್ಲೆಕ್ಸ್ ಬಗ್ಗೆ ಹೈಕೋರ್ಟ್ ಆದೇಶವೂ ಇದೆ. ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ತೆರವು ಮಾಡಲಾಗುವುದು.