ಪ್ರವಾಹದ ಎಚ್ಚರಿಕೆ : 7 ಜಿಲ್ಲೆಗಳಿಗೆ ರೆಡ್ ಅಲರ್ಟ್!

ಸೋಮವಾರ, 10 ಜುಲೈ 2023 (12:09 IST)
ಮುಂಗಾರು ಈ ಬಾರಿ ತಡವಾಗಿ ಆಗಮಿಸಿದರೂ ಹಲವು ರಾಜ್ಯಗಳಲ್ಲಿ ಅನಾಹುತಗಳನ್ನು ಸೃಷ್ಟಿಸುತ್ತಿದೆ. ದೆಹಲಿಯ ಎನ್ಸಿಆರ್ನಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ.

ಹಿಮಾಚಲಪ್ರದೇಶದಲ್ಲೂ ಮಳೆ ಸುರಿಯುತ್ತಿದ್ದು, ಪ್ರವಾಹ ಎಚ್ಚರಿಕೆ ನೀಡಲಾಗಿದ್ದು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಇದಲ್ಲದೇ ಜುಲೈ 10ಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಏತನ್ಮಧ್ಯೆ, ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿಯಲ್ಲಿಯೂ ಪ್ರವಾಹ ಮತ್ತು ಹಿಮಕುಸಿತದ ಎಚ್ಚರಿಕೆಗಳನ್ನು ನೀಡಲಾಗಿದೆ.

 
ಲಾಹೌಲ್-ಸ್ಪಿತಿಯಲ್ಲಿ ಆಗುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಹಿಮಕುಸಿತಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶನಿವಾರದಂದು 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 3 ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇದಲ್ಲದೇ ಭೂಕುಸಿತದ ಎಚ್ಚರಿಕೆಯನ್ನೂ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ