ಮಂಡ್ಯದಲ್ಲಿ ನಿಷೇಧಾಜ್ಞೆ! ಟಫ್ ರೂಲ್ಸ್ ಜಾರಿ

ಗುರುವಾರ, 20 ಜನವರಿ 2022 (12:48 IST)
ಮಂಡ್ಯ : ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಜಿಲ್ಲಾಡಳಿತ ಜನವರಿ 31ರ ವರೆಗೆ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ವಿಸ್ತರಣೆ ಮಾಡಿದ್ದು, ಮತ್ತಷ್ಟು ಟಫ್ ರೂಲ್ಸ್ ಗಳನ್ನು ಜಾರಿಗೆ ತಂದಿದೆ.

ದಿನೇ ದಿನೇ ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ 144 ಸೆಕ್ಷನ್ ವಿಸ್ತರಣೆಯಾಗಿದರ. ಹೀಗಾಗಿ ಜನವರಿ ಅಂತ್ಯದವರೆಗೂ ನಿಷೇಧಾಜ್ಞೆ ವಿಸ್ತರಿಸಿರುವುದಾಗಿ ಹಾಗೂ ವಿಕೇಂಡ್, ನೈಟ್ ಕರ್ಫ್ಯೂವನ್ನು ಮುಂದುವರಿಸುವುದಾಗಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಈ ಟಫ್ ರೂಲ್ಸ್ ಕುರಿತು ಜಿಲ್ಲೆಯ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಜನರ ವಿರೋಧದ ನಡುವೆಯೂ ಕೊರೊನಾ ಹತೋಟಿಗೆ ತರಬೇಕೆಂಬ ಅನಿವಾರ್ಯತೆಯಿಂದ ಜನವರಿ 31ರ ವರೆಗೆ ಟಫ್ ರೂಲ್ಸ್ ನ್ನು ಮುಂದುವರಿಕೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಜರುಗುವ ಮದುವೆ, ನಿಶ್ಚಿತಾರ್ಥ, ಬೀಗರ ಔತಣಕ್ಕೆ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದರೆ, ಅಂತ್ಯಸಂಸ್ಕಾರ ಹಾಗೂ ತಿಥಿ ಕಾರ್ಯಕ್ಕೆ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ