ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ರಾಮಲಿಂಗಾರೆಡ್ಡಿ
ಬುಧವಾರ, 31 ಮೇ 2023 (06:46 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು (ಮೇ.30) ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಾಲ್ಕು ನಿಗಮಗಳ ವ್ಯವಸ್ಥಾಪಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಕಾರ್ಡ್ದಾರರು ಎಂದು ಹೇಳಿಲ್ಲ. ಹಾಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು. ಇದರೊಂದಿಗೆ ಕಾಂಗ್ರೆಸ್ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿದಂತಾಗಿದೆ.
ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇಂದಿನ ಸಭೆಯಲ್ಲಿ ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಭೆಯ ವರದಿ ಸಲ್ಲಿಸುತ್ತೇವೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ನಿನ್ನೆ (ಮೇ.29) ಸಿಎಂ ಸಿದ್ದರಾಮಯ್ಯನವರು ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿಸಿದರು.