ಇಂದು ಅಧಿವೇಶನದಲ್ಲಿ ಮಂಡನೆಯಾಗುವ ಮಸೂದೆ ಬಗ್ಗೆ ಫುಲ್ ಡೀಟೈಲ್ಸ್

ಮಂಗಳವಾರ, 21 ಡಿಸೆಂಬರ್ 2021 (06:43 IST)
ಬೆಳಗಾವಿ : ಇಂದು ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ.
 
ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021
ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧುವಾಗಿದೆ. ಇದನ್ನು ನೇರ ವಿಚಾರಣೆಗೆ ಒಳಪಡಿಸಬಹುದು.

ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಭಾವನಾತ್ಮಕವಾಗಿ ಸೆಳೆದು ಮತಾಂತರ ಮಾಡುವುದು ಅಪರಾಧ. ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು ಎಂದು ಘೋಷಿಸಲು ಕೌಟುಂಬಿಕ ನ್ಯಾಯಾಲಯಕ್ಕೆ ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.
ದಂಡ ಎಷ್ಟು?

ಎಸ್ಸಿ, ಎಸ್ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವ ಹಾಗಿಲ್ಲ. ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.

ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು.
ಪರಿಹಾರವೇನು?

ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ ನೀಡಬೇಕಾಗುತ್ತದೆ. ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ ಮಾಡಬೇಕಾಗುತ್ತದೆ. ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ