ಬೆಂಗಳೂರು : ರಾಜ್ಯದಲ್ಲಿ ಚಳಿಯ ಅಬ್ಬರ ಮತ್ತಷ್ಟು ಜೋರಾಗಿದೆ. ದಿನ ಕಳೆದಂತೆ ಕನಿಷ್ಠ ತಾಪಮಾನ ಮತ್ತಷ್ಟು ಕುಸಿತ ಕಂಡಿದ್ದು, ಉತ್ತರ ಕರ್ನಾಟಕ ಅಕ್ಷರಶಃ ಚಳಿಗೆ ತತ್ತರಿಸಿದೆ.
ಉತ್ತರ ಕರ್ನಾಟಕದ ಬಾಗಲಕೋಟೆಯಲ್ಲಿ ಮಂಗಳವಾರ ಅತಿ ಕಡಿಮೆ 6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಬುಧವಾರ ಕೂಡ ಅದೇ ಪರಿಸ್ಥಿತಿ ಮುಂದುವರೆದಿದೆ.
ಅಲ್ಲದೆ ಮುಂದಿನ 24 ಗಂಟೆಗಳು ಉತ್ತರ ಕರ್ನಾಟಕದ ಬೀದರ್, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಗೆ ಶೀತ ಮಾರುತಗಳು ಹೆಚ್ಚಾಗುವ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ.
ಅಲ್ಲದೆ ಮುಂದಿನ 24 ಗಂಟೆ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ರಾಜ್ಯದ ಇತರ ಭಾಗಗಳಲ್ಲೂ 3 ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.