ಗಣೇಶ ಚತುರ್ಥಿ ಹಬ್ಬ : ಖಾಸಗಿ ಬಸ್ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

ಶನಿವಾರ, 16 ಸೆಪ್ಟಂಬರ್ 2023 (08:42 IST)
ಬೆಂಗಳೂರು : ಗಣೇಶ ಚತುರ್ಥಿ ಹಬ್ಬವನ್ನು ವಿಜ್ರಂಭಣೆಯಿಂದ ಆರಚಿಸಲು ಇಡೀ ದೇಶವೇ ಸಜ್ಜಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲಿ ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ.
 
ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್ಗಳ ದರ ಹೆಚ್ಚಿಸಲಾಗಿದೆ. ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಹೀಗಾಗಿ ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು.

ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ. ಗಣೇಶ ಹಬ್ಬದ ಹಿಂದಿನ ದಿನ ಊರಿಗೆ ಹೊಗ್ಬೇಕಂದರೆ ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು.

ಖಾಸಗಿ ಬಸ್ ದರ ಹೆಚ್ಚಳ ಏಕೆ?
•             ಸೆಪ್ಟೆಂಬರ್ 18-19 ಗಣೇಶ ಹಬ್ಬ
•             ಸೆಪ್ಟೆಂಬರ್ 17 ಭಾನುವಾರ
•             ಸೆಪ್ಟೆಂಬರ್ 16 ರಂದು ಕೆಲಸ ಮಾಡಿ ಊರಿಗೆ ಹೋಗಲಿರುವ ಸರಕಾರಿ, ಖಾಸಗಿ ಕಂಪನಿ ನೌಕರರು
ಈ ಕಾರಣಕ್ಕೆ ಶನಿವಾರದಿಂದಲ್ಲೇ ಜನ ತಮ್ಮ ತಮ್ಮ ಊರಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ