ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ʼನಿಯಮ ಸಡಿಲಿಕೆʼ ವಿಚಾರ : ಬೊಮ್ಮಾಯಿ ಹೇಳಿದ್ದೇನು?

ಶುಕ್ರವಾರ, 10 ಸೆಪ್ಟಂಬರ್ 2021 (11:31 IST)
ಬೆಂಗಳೂರು : ಬೆಂಗಳೂರಿನಲ್ಲಿ ಗಣೇಶ ಹಬ್ಬದ ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬಿಬಿಎಂಪಿ ಜೊತೆಗೆ ಸಚಿವ ಆರ್. ಅಶೋಕ್ ಚರ್ಚೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಆರ್. ಅಶೋಕ್ ಅವರು ಬಿಬಿಎಂಪಿ ಜೊತೆಗೆ ಚರ್ಚೆ ನಡೆಸುವಂತೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಬಿಬಿಎಂಪಿ ಐದು ದಿನಗಳ ಬದಲಾಗಿ ಮೂರು ದಿನಗಳಿಗೆ ಗಣೇಶೋತ್ಸವ ಸೀಮಿತಗೊಳಿಸಿದೆ, ಜೊತೆಗೆ ಇತರೇ ಕಟ್ಟುನಿಟ್ಟಿನ ಕ್ರಮಗಳನ್ನು ವಿಧಿಸಿದೆ. ಇದು ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಭಜರಂಗದಳ, ವಿ ಎಚ್ ಪಿ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಇತರೇ ಸಂಘಟನೆಗಳ ಕಾರ್ಯಕರ್ತರು ಬಿಬಿಎಂಪಿ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ