ಮಳೆ ಹಾನಿಗೊಳಗಾದ ಜಿಲ್ಲೆಗಳಿಗೆ ಶೀಘ್ರವೇ ಪರಿಹಾರ ನೀಡಿ : ಸಿಎಂ ಸೂಚನೆ

ಗುರುವಾರ, 6 ಜುಲೈ 2023 (11:18 IST)
ಬೆಂಗಳೂರು : ಕಳೆದೆರಡು ದಿನಗಳಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
 
ಅಲ್ಲದೆ ಕೆಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಪರಿಹಾರವನ್ನು ನಿಡುವಂತೆ ಸೂಚಿಸಿದ್ದಾರೆ.

ಈ ಸಂಬಂಧ ಸಿಎಂ ಆಫ್ ಕರ್ನಾಟಕದಿಂದ ಟ್ವೀಟ್ ಮಾಡಲಾಗಿದ್ದು, ಮೂರು ಜಿಲ್ಲೆಯ ಉತುವಾರಿ ಸಚಿವರುಗಳಿಗೆ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವಂತೆಯೂ ಸೂಚಿಸಲಾಗಿದೆ. 

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸೂಚಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ