ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ, ವೋಟರ್ ಐಡಿ, ಆಧಾರ್ ನೀಡಿ: ಸುಪ್ರೀಂ

ಬುಧವಾರ, 15 ಡಿಸೆಂಬರ್ 2021 (12:25 IST)
ನವದೆಹಲಿ : ಮೂಲಭೂತ ಹಕ್ಕುಗಳನ್ನು ಪಡೆಯಲು ದೇಶದ ಪ್ರತಿಯೊಬ್ಬ ನಾಗರಿಕರು ಅರ್ಹರು.
 
ಹೀಗಾಗಿ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ, ವೋಟರ್ ಐಡಿ, ಆಧಾರ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಆರಂಭಿಸುವಂತೆ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಪೀಠವು, ಯಾವುದೇ ಪುರಾವೆ ಇಲ್ಲದಿದ್ದರೂ ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ನೀಡುವಂತೆ ಕೇಂದ್ರ ಹಾಗೂ ಇತರೆ ಸರ್ಕಾರಗಳಿಗೆ ಸೂಚನೆ ನೀಡಿತ್ತು.

ದಶಕದ ಹಿಂದೆಯೇ ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ಹಾಗೂ ಗುರುತಿನ ಚೀಟಿಯನ್ನು ನೀಡುವಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ. ಆದರೂ ಅದು ಯಾಕೆ ಅನುಷ್ಠಾನಕ್ಕೆ ಬಂದಿಲ್ಲ ಎಂದು ಪೀಠವು ಪ್ರಶ್ನಿಸಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ