ಮತ್ತಷ್ಟು ಏರಿಕೆಯಾದ ಚಿನ್ನ! ಇಂದಿನ ಬೆಲೆ ಎಷ್ಟಿದೆ ತಿಳಿಯಿರಿ

ಶನಿವಾರ, 18 ಡಿಸೆಂಬರ್ 2021 (07:12 IST)
ಬೆಂಗಳೂರು : ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಅದರಲ್ಲೂ ಮಹಿಳೆಯರಿಗೆ ಹೊಸ ಹೊಸ ಶೈಲಿಯ ಆಭರಣಗಳನ್ನು ಖರೀದಿಸಬೇಕು ಎಂಬ ಬಯಕೆ ಸದಾ ಇರುತ್ತದೆ.
 
ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ.

ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ.

ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಡಿಸೆಂಬರ್ 18, ಶನಿವಾರ) ಚಿನ್ನ, ಬೆಳ್ಳಿ ದರ ದೇಶದ ನಗರಗಳಲ್ಲಿ ಏರಿಕೆಯಾಗಿದ್ದು, ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,000 ರೂಪಾಯಿ ಏರಿಕೆ ಕಂಡು ಬಂದಿದೆ.

ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 4,300 ರೂಪಾಯಿ ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 900 ಏರಿಕೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ