ಆಂಧ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್!

ಮಂಗಳವಾರ, 1 ಫೆಬ್ರವರಿ 2022 (08:39 IST)
ಅಮರಾವತಿ : ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಹೊರಡಿಸಿದೆ.

ಈ ನಿಯಮ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರ ನಿರ್ಧಾರವು ನೌಕರರಲ್ಲೂ ಅಚ್ಚರಿ ಮೂಡಿಸಿದೆ.

ನಿವೃತ್ತಿ ವಯಸ್ಸನ್ನು ಹೆಚ್ಚಿಸಿ ಎಂದು ಸರ್ಕಾರಿ ನೌಕರರು ಯಾರೂ ಪ್ರತಿಭಟನೆ ಮಾಡಿಲ್ಲ. ಆದರೂ ಸರ್ಕಾರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದೆ. ಈ ಹಿಂದೆ ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲೂ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿವೆ.

ತೆಲಂಗಾಣದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61ಕ್ಕೆ ಹೆಚ್ಚಿಸಲಾಗಿದೆ. ಮಧ್ಯಪ್ರದೇಶದಲ್ಲಿ ನಿವೃತ್ತಿ ವಯಸ್ಸು 62. ಕೇಂದ್ರ ಸರ್ಕಾರದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ಆಗಿದೆ. ಆದರೆ ಇದೀಗ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 2 ವರ್ಷ ಮುಂದೆ ಹಾಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ