ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು “ಒಂದು ಜಿಲ್ಲೆ, ಒಂದು ಕ್ರೀಡೆ” ಯೋಜನೆಯನ್ನು ಪರಿಚಯಿಸಲು ಚಿಂತನೆ ನಡೆಸುತ್ತಿದೆ ಎಂದು ಯುವ ಸಬಲೀಕರಣ, ಕ್ರೀಡೆ ಮತ್ತು ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಮಂಗಳವಾರ (ಜು.11) ಹೇಳಿದ್ದಾರೆ.
ರಾಜ್ಯಾದ್ಯಂತ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಸಚಿವ ನಾಗೇಂದ್ರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಸೈಕ್ಲಿಂಗ್, ಕುಸ್ತಿ, ಸೇರಿದಂತೆ ವಿಜಯಪುರ ವಿವಿಧ ಕ್ರೀಡೆಗಳಿಗೆ ಜನಪ್ರಿಯವಾಗಿವೆ.
ಇನ್ನೂ ಹೋಬಳಿಯಿಂದ ಜಿಲ್ಲಾ ಮಟ್ಟದವರೆಗೂ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಲು ಈ ಯೋಜನೆ ಸಹಕಾರಿಯಾಗಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಅತ್ಯುತ್ತಮ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಮೀಸಲಿಟ್ಟಿದ್ದು, ಈ ಭಾಗದ ಅಭಿವೃದ್ಧಿಗೆ ಇದನ್ನು ಸಮರ್ಪಕವಾಗಿ ಬಳಕೆ ಮಾಡಲಾಗುವುದು ಎಂದು ಹೇಳಿದ್ದಾರೆ.