ಹುಬ್ಬಳ್ಳಿ : ಹುಬ್ಬಳ್ಳಿ, ಧಾರವಾಡ ಹಾಗೂ ಉತ್ತರ ಕರ್ನಾಟಕ ಭಾಗದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲ ಕಲ್ಲಿಸಲು ಹೊಸ ರೈಲು ಸೇವೆ ಸೋಮವಾರದಿಂದ (ನವೆಂಬರ್ 7) ಆರಂಭವಾಗಲಿದೆ.
ಹುಬ್ಬಳ್ಳಿಯಿಂದ ಶಬರಿಮಲೆಗೆ ಪ್ರಯಾಣಿಸಲು ರೈಲು ವ್ಯವಸ್ಥೆ ಕಲ್ಪಿಸುವಂತೆ ಅಯ್ಯಪ್ಪ ಸ್ವಾಮಿ ಭಕ್ತರ ಮನವಿಗೆ ಸ್ಪಂದಿಸಿದ್ದು, ಈ ಸೇವೆ ಆರಂಭಿಸಿರುವುದಾಗಿ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.
ಅಯ್ಯಪ್ಪ ಸ್ವಾಮಿ ಭಕ್ತರ ಕೋರಿಕೆಗೆ ಸ್ಪಂದಿಸಿದ ಪ್ರಹ್ಲಾದ್ ಜೋಶಿ, ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಗಮನಕ್ಕೆ ಈ ವಿಷಯ ತಂದು, ಸೂಕ್ತ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದ್ದರು.
ಪ್ರತಿ ವರ್ಷ ಲಕ್ಷಾಂತರ ಭಕ್ತರು ಉತ್ತರ ಕರ್ನಾಟಕದ ಭಾಗದಿಂದ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ತೆರಳುತ್ತಾರೆ. ಇದರಿಂದ ಹುಬ್ಬಳ್ಳಿ-ಧಾರವಾಡ ಅಷ್ಟೇ ಅಲ್ಲದೇ, ಉತ್ತರ ಕರ್ನಾಟಕ ಭಾಗದ ಎಲ್ಲ ಭಕ್ತರಿಗೂ ರೈಲಿನ ಅನುಕೂಲವಾಗಲಿದೆ.