ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್
ರೈತರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಸಲುವಾಗಿ ಯಶಸ್ವಿನಿ ಯೋಜನೆ ರಾಜ್ಯದಲ್ಲಿ 2003 ರಿಂದ ಆರಂಭವಾಗಿತ್ತು. ಆ ಬಳಿಕ 2018ರಲ್ಲಿ ಈ ಯೋಜನೆಯನ್ನು ರದ್ದು ಪಡಿಸಲಾಗಿತ್ತು.
ಇದೀಗ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಪರಿಷ್ಕಣೆಯೊಂದಿಗೆ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕಳೆದ ಬಜೆಟ್ನಲ್ಲಿ ಯೋಜನೆ ಮರುಜಾರಿ ಬಗ್ಗೆ ಬಿಜೆಪಿ ಸರ್ಕಾರ ಪ್ರಸ್ತಾಪಿಸಿತ್ತು.
ಇದೀಗ ಯಶಸ್ವಿನಿ ಪರಿಷ್ಕೃತ ಯೋಜನೆಗೆ ಬೊಮ್ಮಾಯಿ ಸರ್ಕಾರ 300 ಕೋಟಿ ರೂ. ನಿಗದಿ ಪಡಿಸಿದೆ. ನವೆಂಬರ್ 1 ರಿಂದ ಯೋಜನೆಯಡಿ ಸದಸ್ಯತ್ವ ನೋಂದಣಿ ಆರಂಭವಾಗಲಿದೆ.