ಬೆಳಗಾವಿ : ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ಮಂಡಿಸಲಾಯಿತು.
ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ) ವಿಧೇಯಕ ಮತ್ತು ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡಿಸಿದರು.
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು (ಎರಡನೇತಿದ್ದುಪಡಿ) ವಿಧೇಯಕ ಮಂಡಿಸಿದರು.
ಇನ್ನು ಸರ್ಕಾರಿ ಸರ್ವೇಯರಗಳು ಅಸ್ತಿಗಳ ವಿಭಜನೆಗೆ ನಕ್ಷೆ (11ಇ ಸ್ಕೆಚ್), ಭೂಪರಿವರ್ತನೆ ಪೋಡಿ ಮಾಡುವ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸುವ ಸಂಬಂಧ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಗಿದೆ. ಪ್ರಸ್ತುತ ಈ ಕಾರ್ಯವನ್ನು ಪರವಾನಗಿ ಪಡೆದ ಸರ್ವೇಯರ್ ಮಾತ್ರ ಮಾಡುತ್ತಿದ್ದಾರೆ. ವಿಧೇಯಕದಲ್ಲಿ ಸರ್ಕಾರಿ ಸರ್ವೇಯರ್ಗಳಿಗೂ ಅವಕಾಶ ಕೊಡಲಾಗಿದೆ.