ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಗರ್ಭಿಣಿಯರಿಗೆ ಸಿಹಿಸುದ್ದಿ

ಗುರುವಾರ, 5 ಜುಲೈ 2018 (12:34 IST)
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು,ಈ ಮೂಲಕ ಈ ಹಿಂದೆ ಕಾಂಗ್ರೆಸ್ ಸರ್ಕಾರ ಗರ್ಭಿಣಿ ಹಾಗೂ ಬಾಣಂತಿಯರ ಸದೃಢ ಆರೋಗ್ಯಕ್ಕಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲೂ ಜಾರಿಗೊಳಿಸಿದ ಮಾತೃಶ್ರೀ ಯೋಜನೆಯ ಮುಂದುವರೆದ ಭಾಗವಾಗಿ ಸಮ್ಮಿಶ್ರ ಸರ್ಕಾರ ಕೂಡ ಹೆರಿಗೆ ಪೂರ್ವದ ಮೂರು ತಿಂಗಳು ಹಾಗೂ ಹೆರಿಗೆ ನಂತರ ಮೂರು ತಿಂಗಳು 1000ರೂ ನೀಡಲಿದೆ.


ಈ ಯೋಜನೆಗಾಗಿ 350ಕೋಟಿ ರೂ ವೆಚ್ಚವಾಗಲಿದ್ದು. 2018 ನವೆಂಬರ್ 1 ರಿಂದ ಜಾರಿಗೆ ಬರಲಿದೆ ಎಂದು ಸಿಎಂ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ