ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್!

ಸೋಮವಾರ, 11 ಜುಲೈ 2022 (11:40 IST)
ನವದೆಹಲಿ : ಅಡುಗೆ ಎಣ್ಣೆ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.
 
ಅಡುಗೆ ಎಣ್ಣೆ ಬೆಲೆಯಲ್ಲಿ ಇಳಿಕೆಯಾಗಿದೆ. ಪ್ರತಿ ಲೀಟರ್ ಅಡುಗೆ ಎಣ್ಣೆ ಬೆಲೆಯಲ್ಲಿ 15 ರೂಪಾಯಿ ಇಳಿಕೆ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ. 

ಬೆಲೆ ಇಳಿಕೆಗೆ ಈ ಹಿಂದೆಯೇ ಕೇಂದ್ರ ಸರ್ಕಾರ ಸೂಚಿಸಿತ್ತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಇಳಿಕೆ ಹಿನ್ನೆಲೆ ದೇಶದಲ್ಲೂ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಇದಕ್ಕೆ ಕಂಪನಿಗಳು ಒಪ್ಪಿಗೆ ಸೂಚಿಸಿರುವ ಕಾರಣ ಬೆಲೆ ಇಳಿಕೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ