ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧ ; ಸಿಎಂ
ಅವರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ತೆರಳಿದ್ದಾರೆ.
ಈ 80 ಮಂದಿ ಕನ್ನಡಿಗರು ಅಮರಾನಾಥ ಮಂದಿರದಿಂದ 6 ಕಿಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.