ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ!
ಹೌದು.. ಸರ್ಕಾರಿ ನೌಕರರು ಕಚೇರಿಗಳಲ್ಲಿ ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ ಅಂತ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಜಿಲ್ಲಾಧಿಕಾರಿ ಆರ್ಯಕಾ ಚೌಧರಿ ಆದೇಶ ಹೊರಡಿಸಿದ್ದಾರೆ.
ಈ ಜಿಲ್ಲೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕರು, ಇತರೆ ಇಲಾಖೆಗಳ ನೌಕರರು ಜೀನ್ಸ್-ಟೀ ಶರ್ಟ್ ಧರಿಸುವಂತಿಲ್ಲ. ಕೇವಲ ಫಾರ್ಮಲ್ಸ್ ಧರಿಸಲಷ್ಟೇ ಅವಕಾಶ. ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಅಂತ ಎಚ್ಚರಿಕೆ ನೀಡಿದ್ದಾರೆ.