ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ರಾಜ್ಯಾದ್ಯಂತ ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಲಸಿಕೆ ಪಡೆಯದ ಸರ್ಕಾರಿ ನೌಕರರಿಗೆ ಕಚೇರಿಗೆ ಪ್ರವೇಶವಿಲ್ಲ ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ. 2 ಡೋಸ್ ಲಸಿಕೆ ಪಡೆಯದ ಸಿಬ್ಬಂದಿಗೆ ಕಚೇರಿ ಪ್ರವೇಶವಿಲ್ಲ.
ಈ ಬಗ್ಗೆ ಈಗಾಗಲೇ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಖಾಸಗಿ ಸಂಸ್ಥೆಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಜನವರಿ 3 ರಂದು 15-18 ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತೆ. ಜನವರಿ 3 ರಂದು ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. 60 ವರ್ಷ ಮೇಲ್ಪಟ್ಟ ಹೆಲ್ತ್ ವರ್ಕರ್ಸ್ಗೆ ಬೂಸ್ಟರ್ ಡೋಸ್ಗೆ ಚಾಲನೆ ನೀಡ್ತೇವೆ ಎಂದು ಹೇಳಿದ್ದಾರೆ.