9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ
ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಫಸ್ಟ್ ಪಿಯುಸಿ ಓದುತ್ತಿದ್ದ 18 ವರ್ಷದ ಯುವತಿ ರಕ್ಷಿತಾ, ಐದು ದಿನಗಳ ಹಿಂದೆ ಸರ್ಕಾರಿ ಬಸ್ನಿಂದ ಇಳಿಯುವಾಗ ಆಯಾ ತಪ್ಪಿ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು.
ಕೂಡಲೇ ಆಸ್ಪತ್ರೆಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹಾಗಾಗಿ, ರಕ್ಷಿತಾ ಪೋಷಕರು ಆಕೆಯ ಸಾವಿನ ನೋವಿನಲ್ಲೂ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದರು.
ಆಕೆಯ ಒಂಬತ್ತು ಅಂಗಾಂಗಳಿಂದ 9 ಜನರ ಜೀವ ಉಳಿದಿದೆ. ಹಾಗಾಗಿ, ಸರ್ಕಾರ ಆಕೆಯ ಕುಟುಂಬಕ್ಕೆ ಪರಿಹಾರ ಎನ್ನುವುದಕ್ಕಿಂತ ಗೌರವಯುತವಾಗಿ ಎಂಟು ಲಕ್ಷ ರೂ. ಹಣವನ್ನು ನೀಡಿದೆ.