ಉದ್ಯೋಗಿಗಳಿಗೆ ಶಾಕ್ ಕೊಟ್ಟ ಸರ್ಕಾರ!

ಸೋಮವಾರ, 6 ಜೂನ್ 2022 (08:40 IST)
ನವದೆಹಲಿ : 2021-22ರ ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಠೇವಣಿಯ ಮೇಲೆ ಒದಗಿಸುವ ಬಡ್ಡಿದರವನ್ನು ಶೇ. 8.1ಕ್ಕೆ ಇಳಿಕೆ ಮಾಡುವ ನಿರ್ಧಾರಕ್ಕೆ ಸರ್ಕಾರ ಅನುಮೋದನೆ ನೀಡಿದೆ.

ಇದು ಕಳೆದ 4 ದಶಕಗಳಲ್ಲೇ ಕನಿಷ್ಠ ಬಡ್ಡಿದರವೆನಿಸಿದೆ. ಇದು ಇಪಿಎಫ್ನ ಬಡ್ಡಿದರವನ್ನೇ ಅವಲಂಬಿಸಿರುವ ಸುಮಾರು 5 ಕೋಟಿ ಜನರಿಗೆ ಹೊಡೆತ ನೀಡಲಿದೆ.

ಈ ವರ್ಷ ಮಾಚ್ರ್ನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು, ಇಪಿಎಫ್ ಠೇವಣಿಗಳ ಮೇಲೆ ಒದಗಿಸುವ ಬಡ್ಡಿದರವನ್ನು ಶೇ.8.5ರಿಂದ ಶೇ.8.1ಗೆ ತಗ್ಗಿಸಲು ನಿರ್ಧಾರ ಮಾಡಿತ್ತು. ಇದಕ್ಕೆ ಕಾರ್ಮಿಕ ಸಂಘಟನೆಗಳು ಮತ್ತು ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ಇದರ ಹೊರತಾಗಿಯೂ, ಇಪಿಎಫ್ ಬಡ್ಡಿದರವನ್ನು ಶೇ.8.5ರಿಂದ ಶೇ.8.1ಕ್ಕೆ ಇಳಿಸುವ ಮಂಡಳಿ ನಿರ್ಧಾರವನ್ನು ಕೇಂದ್ರ ಕಾರ್ಮಿಕ ಸಚಿವಾಲಯವು ಅನುಮೋದಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ