ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ!

ಸೋಮವಾರ, 3 ಜನವರಿ 2022 (06:49 IST)
ಬೆಳಗಾವಿ : ಕಳೆದ ಒಂದು ವಾರದಲ್ಲಿ ಕೊರೊನಾ, ಓಮಿಕ್ರಾನ್ ಕೇಸ್ ಹೆಚ್ಚಾಗ್ತಿದೆ.

ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು.

ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್ ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ. ಬೆಳಗಾವಿಯಲ್ಲೂ ಚೆಕ್ ಪೋಸ್ಟ್ ಗಳನ್ನು ಮಾಡಲಾಗುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ