ಬೆಂಗಳೂರು : ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ 1 ರಿಂದ 5 ನೇ ತರಗತಿಯವರೆಗೆ ಶಾಲೆಗಳನ್ನು ಅಕ್ಟೋಬರ್ 25 ರಿಂದ ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.
ಶಾಲೆಗಳ ಆರಂಭಕ್ಕೆ ಸರಕಾರ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದು, ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯವಾಗಿರಬೇಕು ಎಂದು ಸೂಚನೆ ನೀಡಿದೆ.
ಶಿಕ್ಷಕರು ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು. ತರಗತಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಶಾಲೆಗೆ ಹಾಜರಾಗುವುದು ಮಕ್ಕಳಿಗೆ ಕಡ್ಡಾಯವಾಗಿರುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ತರಗತಿಯಲ್ಲಿ 50 % ಮಾತ್ರ ವಿದ್ಯಾರ್ಥಿಗಳು ಹಾಜರಿರಬೇಕು, 1 ಮೀಟರ್ ದೈಹಿಕ ಅಂತರ ಕಾಪಾಡುವುದು ಅಗತ್ಯ ಎಂದು ಮಾರ್ಗ ಸೂಚಿಯಲ್ಲಿ ಹೇಳಲಾಗಿದೆ