ಬೆಂಗಳೂರು : ಕಾಂಗ್ರೆಸ್ ಸರ್ಕರದ ಗ್ಯಾರಂಟಿ ಯೋಜನೆಗಳ ಜಾರಿಗೆ ಕೌಂಟ್ಡೌನ್ ಶುರುವಾಗಿದೆ. ಜೂನ್ 12 ರಂದು ಶಕ್ತಿ ಯೋಜನೆ ಜಾರಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇದೀಗ ಮತ್ತೆರಡು ಗ್ಯಾರಂಟಿಗಳಾದ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಚಾಲನೆಗೂ ಮುಂದಾಗಿದೆ.
ನುಡಿದಂತೆ ನಡೆಯುವ ಸರ್ಕರ ಎಂದಿರುವ ಸಿದ್ದರಾಮಯ್ಯ, ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳನ್ನ ಈಡೇಸಲಿದ್ದಾರೆ. ಈಗಾಗಲೇ ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಗ್ರಾಹಕರು ಮುಗಿಬೀಳುತ್ತಿದ್ದಾರೆ.
ಗೃಹಜ್ಯೋತಿ ಯೋಜನೆ ಅಡಿಯಲ್ಲಿ ನಾಳೆಯಿಂದ (ಜು 01ರ ರಾತ್ರಿ 12 ಗಂಟೆ) ಬಳಸುವ 200 ಯುನಿಟ್ ಒಳಗಿನ ಸರಾಸರಿ ಕರೆಂಟ್ಗೆ ಬಿಲ್ ಕಟ್ಟುವಂತಿಲ್ಲ. ಜುಲೈ ತಿಂಗಳ ವಿದ್ಯುತ್ ಬಿಲ್ ಆಗಸ್ಟ್ ತಿಂಗಳಲ್ಲಿ ಬರಲಿದೆ. ಬರುವ ಕರೆಂಟ್ ಬಿಲ್ ನಲ್ಲಿ ಶಕ್ತಿ ಯೋಜನೆಯಂತೆ ಗೃಹಜ್ಯೋತಿಯ ಉಚಿತ ಬಿಲ್ ಎಂದು ಹೆಸರು ಬರುವ ಸಾಧ್ಯತೆಗಳಿವೆ.
ಇನ್ನು ಈ ಗೃಹಜ್ಯೋತಿ ಅರ್ಜಿ ಸಲ್ಲಿಕೆಯನ್ನ ಜೂನ್ 18 ರಿಂದ ಆರಂಭ ಮಾಡಲಾಗಿದ್ದು, ಗೃಹಜ್ಯೋತಿಯ ಫಲಾನುಭವಿಗಳು ಒಟ್ಟು 2.14 ಕೋಟಿಯಷ್ಟು ಜನರಿದ್ದಾರೆ. ಈ ಪೈಕಿ ಒಟ್ಟು 11 ದಿನಗಳಲ್ಲಿ ಒಟ್ಟು 8099932 ರಷ್ಟು ಜನರು ಅರ್ಜಿ ಹಾಕಿದ್ದಾರೆ. ಇನ್ನು 1,33 00068 ಕೋಟಿಯಷ್ಟು ಜನ ನೊಂದಾಣಿಗೆ ಅರ್ಜಿ ಹಾಕಬೇಕಿದೆ.