ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ
ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನಂತರ ಅವರನ್ನು ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ವರುಣ್ ಸಿಂಗ್ 95% ಕ್ಕೂ ಹೆಚ್ಚು ಸುಟ್ಟ ಗಾಯಗಳೊಂದಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ಲಿಫ್ಟ್ ಮೂಲಕ ಅವರನ್ನು ಕರೆ ತರಲಾಗಿತ್ತು.