ಬೆಂಗಳೂರು : ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ನಾಳೆಯಿಂದ LKG, UKG,ಅಂಗನವಾಡಿ ಆರಂಭ ಮಾಡಲು ಸರ್ಕಾರ ಮುಂದಾಗಿದೆ.
ಅಂಗನವಾಡಿಗಳ ಆರಂಭಕ್ಕೆ ಮಾರ್ಗಸೂಚಿ ಹೊರಡಿಸಲಾಗಿದೆ.
-ಶಾಲೆಗೆ ಬರುವ ಮಕ್ಕಳು ಪೋಷಕರ ಬಳಿಯಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು.
-ಅನುಮತಿ ಪತ್ರದಲ್ಲಿ ವಿದ್ಯಾರ್ಥಿಗೆ ಕೋವಿಡ್ ಸೋಂಕು ಇಲ್ಲದೆ ಇರೋದನ್ನ ಪೋಷಕರು ಧೃಢಿಕರಿಸಬೇಕು.
-ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
-ಅಂಗನವಾಡಿ ಆರಂಭದ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತರಬೇಕು.
-ಮೊದಲ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಅಂದ್ರೆ ಕೇವಲ 2 ಗಂಟೆ ಮಾತ್ರ ಅಂಗನವಾಡಿ ಓಪನ್ ಮಾಡಲಾಗುತ್ತೆ.
-ಕೊವಿಡ್ ಲಕ್ಷಣ ಇರುವ ಮಕ್ಕಳಿಗೆ ಅಂಗನವಾಡಿ ಪ್ರವೇಶವಿಲ್ಲ.
-ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಬೇಕು.
-ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
-ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಶಾಲೆ ಓಪನ್ ಮಾಡಬೇಕು.
-
LKG, UKG, ಶಾಲೆಗಳು ಬೆಳಗ್ಗೆ 9.30ರಿಂದ 3.30ರವರೆಗೆ ಓಪನ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಸರ್ಕಾರ ತಿಳಿಸಿದೆ.