ಮೊಮ್ಮಗ ಪ್ರಜ್ವಲ್ ರೇವಣ್ಣ ಜತೆಗೆ ಬೀದಿಗಿಳಿಯಲಿರುವ ಎಚ್ ಡಿ ದೇವೇಗೌಡ!

ಶನಿವಾರ, 26 ಮೇ 2018 (10:13 IST)
ಬೆಂಗಳೂರು: ಮೊಮ್ಮಗ ಪ್ರಜ್ವಲ್ ರೇವಣ್ಣ ಜತೆಗೆ ಜೆಡಿಎಸ್ ವರಿಷ್ಠ ದೇವೇಗೌಡರು ಇಂದು ರಾಜರಾಜೇಶ್ವರಿ ನಗರದ ಪ್ರಮುಖ ಬೀದಿಗಳಲ್ಲಿ ಓಡಾಡಲಿದ್ದಾರೆ. ಇದೆಲ್ಲಾ ಇಲ್ಲಿ ನಡೆಯಲಿರುವ ಚುನಾವಣಾ ಪ್ರಚಾರಕ್ಕಾಗಿ.

ನಕಲಿ ವೋಟರ್ ಐಡಿ ಪತ್ತೆಯಾದ ಹಿನ್ನಲೆಯಲ್ಲಿ ಈ ಕ್ಷೇತ್ರದ ಚುನಾವಣೆ ದಿನಾಂಕ ಮುಂದೂಡಲಾಗಿತ್ತು. ಅದು ನಾಡಿದ್ದು ನಡೆಯಲಿದ್ದು, ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಈ ಹಿನ್ನಲೆಯಲ್ಲಿ ಎಲ್ಲಾ ಪಕ್ಷದ ಪ್ರಮುಖ ನಾಯಕರು ಇಂದು ಇಲ್ಲಿ ಅಂತಿಮವಾಗಿ ಮತ ಯಾಚನೆ ನಡೆಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರ ಇಂದು ದೇವೇಗೌಡರು ಮೊಮ್ಮಗ ಪ್ರಜ್ವಲ್ ಜತೆಗೂಡಿ ಆರ್ ಆರ್ ನಗರದ ಪ್ರಮುಖ ಬೀದಿಗಳಲ್ಲಿ ಓಡಾಡಿ ಪಕ್ಷದ ಪರ ಮತ ಯಾಚನೆ ಮಾಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ