ಆರೋಗ್ಯ ವಿಮೆ : ಮಹಾರಾಷ್ಟ್ರದ ಸರ್ಕಾರದಿಂದ ಆದೇಶ

ಗುರುವಾರ, 6 ಏಪ್ರಿಲ್ 2023 (06:48 IST)
ಬೆಳಗಾವಿ : ಮಹಾರಾಷ್ಟ್ರದ ಗಡಿಕ್ಯಾತೆ ಮುಂದುವರಿದಿದ್ದು ಕರ್ನಾಟಕದ 865 ಹಳ್ಳಿಗಳಿಗೆ ಅನ್ವಯವಾಗುವಂತೆ ಆರೋಗ್ಯ ವಿಮೆಯನ್ನು ಮಹಾರಾಷ್ಟ್ರ ಸರ್ಕಾರ ಜಾರಿ ಮಾಡಿ ಆದೇಶ ಹೊರಡಿಸಿ ಉದ್ಧಟತನ ಮೆರೆದಿದೆ.
 
ಈ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿ, ಮಹಾರಾಷ್ಟ್ರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಗಡಿವಿವಾದ ಸುಪ್ರೀಂಕೋರ್ಟ್ನಲ್ಲಿದ್ದರೂ ಮಹಾ ಸರ್ಕಾರ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ.

ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ಮಹಾರಾಷ್ಟ್ರದ ಕನ್ನಡ ಭಾಷಿಕ ಹಳ್ಳಿಗಳಿಗೆ ನಾವೂ ಯೋಜನೆಗಳನ್ನು ಪ್ರಕಟಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ