ಜಿಲ್ಲೆಯಾದ್ಯಂತ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬುಧವಾರ, 5 ಜುಲೈ 2023 (08:53 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು(ಜುಲೈ 04) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
 
ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನಲ್ಲಿ ಮಾತ್ರ ಸದ್ಯಕ್ಕೆ ರಜೆ ನೀಡಲಾಗಿದ್ದು, ಉಳಿದ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ತಹಶೀಲ್ದಾರ್ ಗಳಿಗೆ ನೀಡಲಾಗಿದೆ.

ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಹವಮಾನ ಇಲಾಖೆಯ ವರದಿ ಆಧರಿಸಿ ಯಾವ-ಯಾವ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆಯೋ ಆ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯ ಐದು ತಾಲೂಕುಗಳಲ್ಲಿನ ರಜೆ ಘೋಷಣೆ ಮಾಡಿದ್ದಾರೆ. ಇನ್ನು ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್ಗಳು ರಜೆ ಘೋಷಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ