ರಾತ್ರಿ ಮಳೆಗೆ ಬೆಂಗಳೂರು ಕಂಗಾಲು
ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಕೆಲವೆಡೆ ಮರ, ವಿದ್ಯುತ್ ಕಂಬ ಧರೆಗುರುಳಿವೆ. ಅಂಡರ್ ಪಾಸ್ ಗಳಲ್ಲಿ ನೀರು ತುಂಬ ವಾಹನ ಸಂಚಾರ ಕಷ್ಟವಾಗಿದೆ.
ಗಿರಿನಗರದಲ್ಲಿ ವಿದ್ಯುತ್ ಕಂಬದ ಮೇಲೆ ಮರ ಉರುಳಿಬಿದ್ದು ಹೊತ್ತಿ ಉರಿದ ಘಟನೆಯೂ ನಡೆದಿದೆ. ತಗ್ಗು ಪ್ರದೇಶಗಳಲ್ಲಿ ಮನೆಗೆ ನೀರು ನುಗ್ಗಿ ರಾತ್ರಿಯಿಡೀ ಜನ ಆತಂಕದಿಂದ ಕಳೆಯುವಂತಾಯಿತು. ಇಂದೂ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.