15 ರಾಜ್ಯಗಳಲ್ಲಿ ಭಾರೀ ಮಳೆ!

ಬುಧವಾರ, 9 ಫೆಬ್ರವರಿ 2022 (08:14 IST)
ಬೆಂಗಳೂರು : ಕರ್ನಾಟಕದಾದ್ಯಂತ ಚಳಿಯ ವಾತಾವರಣ ಮುಂದುವರೆದಿದೆ.
 
ಬೆಂಗಳೂರಿನಲ್ಲಿ ಇಂದು ಬಿಸಿಲು ಹೆಚ್ಚಾಗಲಿದ್ದು, ರಾತ್ರಿಯ ನಂತರ ಚಳಿ ಶುರುವಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಇಂದು (ಫೆಬ್ರವರಿ 9) ಮಳೆಯಾಗಲಿದೆ.

ಇನ್ನೆರಡು ದಿನ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಾರ್ಖಂಡ್, ಬಿಹಾರ, ಒಡಿಶಾ  ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಲಡಾಖ್, ದೆಹಲಿ ಮತ್ತು ಚಂಡೀಗಢ ಸೇರಿ 15 ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದು ಜಮ್ಮು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಲಘು ಮಳೆ ಅಥವಾ ಹಿಮಪಾತವಾಗಲಿದೆ. ಇಂದು ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ