ಬೆಂಗ್ಳೂರಿನಲ್ಲಿ ಭಾರೀ ಮಳೆ : ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಕೆ!

ಮಂಗಳವಾರ, 30 ಮೇ 2023 (09:25 IST)
ಬೆಂಗಳೂರು : ನಗರದಲ್ಲಿ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಎಚ್ಚರಿಸಿದೆ.

ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮಂಡ್ಯ ಜಿಲ್ಲೆ ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗಲಿದೆ ಎಂದೂ ಹೇಳಿದೆ. ಈಗಾಗಲೇ ಮಳೆ ಆವರಿಸಿದ್ದು, ದಾಸರಹಳ್ಳಿ, ಮಲ್ಲಸಂದ್ರ, ಬಾಗಲಗುಂಟೆ ಸೇರಿದಂತೆ ಹಲವೆಡೆ ಕಳೆದ ಅರ್ಧ ಗಂಟೆಯಿಂದ ಮಳೆ ಸುರಿಯುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ನೀರು ತುಂಬಿಕೊಂಡಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. 

ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯುತ್ತಿದ್ದು, ಸೋಮವಾರದಿಂದ (ಮೇ 29) ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಕರಾವಳಿ, ದಕ್ಷಿಣ ಒಳನಾಡಿನ ಕೆಲವಡೆ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರ ವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸುವ ಸಾಧ್ಯತೆಯಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ