ಕರ್ನಾಟಕದಲ್ಲಿ ಕಳೆದೊಂದು ತಿಂಗಳಿನಿಂದ ಚಳಿ ಹೆಚ್ಚಾಗಿತ್ತು. ಇದೀಗ 2-3 ದಿನಗಳಿಂದ ರಾಜ್ಯಾದ್ಯಂತ ಶೀತಗಾಳಿ ಕೊಂಚ ಕಡಿಮೆಯಾಗುತ್ತಿದೆ.
ಈಗೊಂದು 2 ವಾರಗಳಿಂದ ರಾಜ್ಯಾದ್ಯಂತ ಮಳೆ ಸಂಪೂರ್ಣವಾಗಿ ಕಡಿಮೆಯಾಗಿತ್ತು. ಆದರೆ, ಇಂದಿನಿಂದ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರುವ ಸಾಧ್ಯತೆಯಿದೆ.
ಪಕ್ಕದ ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳು ಸೇರಿದಂತೆ ದೆಹಲಿ, ಜಮ್ಮು ಕಾಶ್ಮೀರದಲ್ಲೂ ಮಳೆ ಹೆಚ್ಚಾಗಿದೆ. ಹಾಗೇ, ಕೊವಿಡ್ ಕೇಸುಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅನಾರೋಗ್ಯಪೀಡಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಇಂದು (ಭಾನುವಾರ) ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಹಿಮ ಬೀಳುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದ ಮೇಲೆ ವ್ಯಾಪಕವಾದ ಮಳೆ, ಹಿಮ ಮತ್ತು ಗುಡುಗು ಸಹಿತ ಮಳೆಯಾಗಲಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಉತ್ತರಾಖಂಡದಲ್ಲಿ ಸಾಕಷ್ಟು ವ್ಯಾಪಕವಾದ ಮಳೆ, ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ.