ರಾಜ್ಯದಲ್ಲಿ ಇಂದಿನಿಂದ 3-4 ದಿನ ಭಾರೀ ಮಳೆ !

ಸೋಮವಾರ, 29 ಮೇ 2023 (07:10 IST)
ಬೆಂಗಳೂರು : ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಮುಂಗಾರಿಗೂ ಮುನ್ನವೇ ವರುಣನ ಆರ್ಭಟ ಶುರುವಾಗುವ ಲಕ್ಷಣಗಳು ಕಂಡುಬರುತ್ತಿದೆ.
 
ರಾಜ್ಯದಲ್ಲಿ ಇಂದಿನಿಂದ ಮೂರು-ನಾಲ್ಕು ದಿನ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಧಾರಕಾರ ಮಳೆಯ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಗುಡುಗು ಮಿಂಚು ಸಹಿತ ಬಿರುಗಾಳಿಯ ಆರ್ಭಟ ಸಾಧ್ಯತೆ ಹೆಚ್ಚಿದೆ. 

ಮೇ 30 ಮತ್ತು 31 ರಂದು ಧಾರಾಕಾರ ಮಳೆಯಾಗುವ ಸಂಭವವಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ