ರಾಜ್ಯದಲ್ಲಿ ಇಂದು ಭಾರೀ ಮಳೆ!
ರಾಜ್ಯದ ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.