ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ; ಯೆಲ್ಲೋ ಅಲರ್ಟ್ ಘೋಷಣೆ

ಶುಕ್ರವಾರ, 21 ಜುಲೈ 2023 (11:00 IST)
ಬೆಂಗಳೂರು : ರಾಜ್ಯಾದ್ಯಂತ ಇನ್ನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಒತ್ತರ ಒಳನಾಡು ಬೆಳಗಾವಿ, ಕಲಬುರಗಿ , ಬೀದರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯಲ್ಲೊ ಅಲರ್ಟ್ ಘೋಷಣೆ ಮಾಡಿದೆ.
 
ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೆ ಕರಾವಳಿ ಪ್ರದೇಶದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಗಾಳಿ ಘಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ