ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಶುಕ್ರವಾರ, 7 ಏಪ್ರಿಲ್ 2023 (07:06 IST)
ಬೆಂಗಳೂರು : ಮುಂದಿನ ಮೂರು ಗಂಟೆಯ ಒಳಗಡೆ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್, ಬಳ್ಳಾರಿ, ಮೈಸೂರು, ದಾವಣಗೆರೆ, ಬೆಂಗಳೂರು, ತುಮಕೂರು ಜಿಲ್ಲೆಯಲ್ಲಿ ಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಈಗಾಗಲೇ ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಹಾಸನದಲ್ಲಿ ಮೊದಲ ಮಳೆಯಾಗಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡರೆ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ