ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ಸೋಮವಾರ, 12 ಜೂನ್ 2023 (12:05 IST)
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗಬ್ಬೂರು, ಗೋಕರ್ಣ, ಅಂಕೋಲಾ, ಕುಂದಾಪುರ, ಕೋಟ, ಮಂಕಿ, ಭಾಲ್ಕಿ, ಮಂಗಳೂರು, ಸಿದ್ದಾಪುರ, ಕ್ಯಾಸಲ್ ರಾಕ್, ಕದ್ರಾ, ಪಣಂಬೂರು, ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಯಲ್ಲಾಪುರ, ಕುಮಟಾ, ಶಿರಾಲಿ, ಉಪ್ಪಿನಂಗಡಿ, ಭಾಗಮಂಡಲ, ಶಿರಹಟ್ಟಿ, ಗಂಗಾವತಿ, ಚಿಂಚೋಳಿ, ಕುಕನೂರು, ಕಾರವಾರ, ಶಿಗ್ಗಾಂವ್, ಮುಂಡರಗಿ, ಧಾರವಾಡ, ಬರಗೂರು, ಕೊಟ್ಟಿಗೆಹಾರ, ಹುಂಚದಕಟ್ಟೆ, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ