ರಾಜ್ಯಾದ್ಯಂತ ಭಾರೀ ಮಳೆ! 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.