ಭಾರೀ ಮಳೆ : ಇಂದು, ನಾಳೆ ಯೆಲ್ಲೋ ಅಲರ್ಟ್!
ನಗರದಲ್ಲಿ ನಿನ್ನೆ ತಡರಾತ್ರಿಯಿಂದ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಕೂಡ ಭಾರೀ ಮಳೆಯಾಯಿತು. ಇನ್ನೂ ಎರಡು-ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ನಗರದ ಹಲವೆಡೆ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ ಸೇರಿದಂತೆ ನಗರದ ವಿವಿಧೆಡೆ ಮಳೆಯಾಗಿದ್ದು, ಜನ ಪರದಾಡುವಂತಾಯಿತು.