ರಾಜ್ಯಾದ್ಯಂತ ಭಾರೀ ಮಳೆ : ಕರಾವಳಿಗೆ ಯೆಲ್ಲೋ ಅಲರ್ಟ್!

ಶುಕ್ರವಾರ, 14 ಅಕ್ಟೋಬರ್ 2022 (07:06 IST)
ಬೆಂಗಳೂರು : ನಗರ ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆ.ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಮುಂದಿನ 5 ದಿನ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ