ಜಿಲ್ಲೆಯಾದ್ಯಂತ ಭಾರೀ ಮಳೆ!

ಶುಕ್ರವಾರ, 1 ಜುಲೈ 2022 (09:27 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗಿದ್ದು, ಮಂಗಳೂರು ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
 
ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ದೇರೆಬೈಲ್, ಮಾಲೆಮಾರ್, ಜನವಸತಿ ಪ್ರದೇಶಕ್ಕೆ ರಾಜಕಾಲುವೆಯ ನೀರು ನುಗ್ಗಿದ್ದು ಹಲವು ಮನೆಯೊಳಗೂ ನೀರು ನುಗ್ಗಿದೆ.

ರಸ್ತೆಯಲ್ಲಿ ನಿಂತಿರುವ ನೀರು, ವಾಹನ ಸವಾರರ ಪರದಾಟ ನಡೆಸಿದ್ದಾರೆ. ಮನೆಯೊಳಗಿರುವ ಸಾಮಾಗ್ರಿಗಳು ನೀರಿನಲ್ಲಿ ಮುಳುಗಿದ್ದು, ಜನ ಪಾಲಿಕೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಪುತ್ತೂರು, ಸುಳ್ಯ ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಮಳೆ ಆಗಿದೆ. ಈ ಮೊದಲೇ ಜಿಲ್ಲಾಡಳಿತವು ಜಿಲ್ಲೆಯಲ್ಲಿ ದಟ್ಟ ಕಾರ್ಮೋಡ ಮುಸುಕಿದ ವಾತಾವರಣದ ಜೊತೆ ಮಳೆ ಆಗಲಿದೆ.

ಇಂದು ಪೂರ್ತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಮುದ್ರ, ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿತ್ತು. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ